У нас вы можете посмотреть бесплатно ವಿಧಾನಸಭೆ ಅಧಿವೇಶನ ; 600 ಪಿಎಸ್ಐಗಳ ನೇಮಕ : ಸಚಿವ ಪರಮೇಶ್ವರ್ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದ್ದು, ಹೊಸದಾಗಿ 600 ಪಿಎಸ್‌ಐ ಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ 33 ಪೊಲೀಸ್ ಠಾಣೆಗಳಿವೆ. 1 ಸಾವಿರದ 549 ಹುದ್ದೆಗಳು ಮಂಜೂರಾಗಿವೆ. 1 ಸಾವಿರದ 394 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ, 155 ಹುದ್ದೆಗಳು ಖಾಲಿ ಇವೆ ಎಂದು ವಿವರಿಸಿದರು. ಪೊಲೀಸ್ ಸಿಬ್ಬಂದಿ ನೇಮಕಾತಿ ಬಹಳ ವರ್ಷಗಳಿಂದ ನಡೆದಿಲ್ಲ. ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಹಗರಣಗಳಾದವು. ನ್ಯಾಯಾಲಯದಲ್ಲಿ ವಿಚಾರಣೆಯಾಗಿದ್ದು ಎಲ್ಲವನ್ನು ಬಗೆಹರಿಸಲಾಗಿದೆ. ಈಗಾಗಲೇ 947 ಪಿಎಸ್‌ಐ ಗಳನ್ನು ನೇಮಿಸಲಾಗಿದೆ. ಜೊತೆಗೆ ಹೊಸದಾಗಿ 600 ಹುದ್ದೆಗಳನ್ನು ನೇಮಕಾತಿ ಮಾಡಲು ಹಣಕಾಸು ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎಂದರು. ಪೊಲೀಸ್ ಠಾಣೆಗೆ ಬಂದವರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಮತ್ತು ದೂರು ಸ್ವೀಕರಿಸಲು 103 ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಯಾವ ಹುದ್ದೆಗಳನ್ನು ಖಾಲಿ ಇರಿಸಿಲ್ಲ. ಕೆಲಸಗಳನ್ನು ಪುನರ್ ನಿಗದಿ ಮಾಡಲಾಗುತ್ತಿದೆ. ಅಗತ್ಯ ಸಿಬ್ಬಂದಿಗಳನ್ನು ಖಾಯಂ ನೇಮಕಾತಿ ಮಾಡಲಾಗುವುದು ಎಂದು ಹೇಳಿದರು. ಶಿವಮೊಗ್ಗವನ್ನು ಪೋಲೀಸ್ ಆಯುಕ್ತಾಲಯ ಮಾಡಲು ಚಾಲ್ತಿಯಲ್ಲಿರುವ ಮಾನದಂಡಗಳ ಪರಿಶೀಲನೆ ನಡೆಸಲಾಗುವುದು. ಪ್ರತಿಯೊಂದು ಜಿಲ್ಲೆಗೂ ಆಯುಕ್ತಾಲಯ ಮಾಡುವುದರಿಂದ ಕೆಲವು ಗೊಂದಲಗಳಾಗುತ್ತವೆ. ಅದರ ಬಗ್ಗೆಯೂ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಹೇಳಿದರು. ** ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಹಣ ಮೀಸಲಿಡದೆ 12 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಎರಡು ಸಾವಿರ ಕೋಟಿ ರೂಪಾಯಿಗಳಿಗೂ ಮೀರಿದ ಬಿಲ್ ಗಳು ಬಾಕಿ ಇರುವುದರಿಂದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಕ್ಷ್ಮವಾಗಿ ಪರಿಶೀಲನೆ ನಡೆಸಬೇಕಿದೆ ಎಂದು ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಪ್ರಶ್ನೆಗೆ ಉತ್ತರಿಸಿದ ಅವರು, ಮಲೆನಾಡು ಪ್ರದೇಶದಲ್ಲಿ ಸಣ್ಣ ನೀರಾವರಿ ಇಲಾಖೆಗೆ ಕಡಿಮೆ ಅನುದಾನ ನೀಡಲಾಗಿದೆ. 2023ರಲ್ಲಿ ಮಂಜೂರಾದ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದೆ. ಸಚಿವರ ಜೊತೆ ಹಲವಾರು ಬಾರಿ ಈ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಎಂದರು. 2023ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ 12,696 ಕೋಟಿ ರೂಪಾಯಿ ಮೊತ್ತದ 15,519 ಕಾಮಗಾರಿಗಳು ಬಾಕಿ ಇದ್ದವು. ಇದಕ್ಕಾಗಿ 2058 ಕೋಟಿ ಕೋಟಿ ರೂ.ಗಳ ಬಿಲ್ ಬಾಕಿ ಇದೆ. ಸಣ್ಣ ನೀರಾವರಿ ಇಲಾಖೆಗೆ ಒಂದುವರೆ ಸಾವಿರ ಕೋಟಿ ರೂಪಾಯಿ ಮಾತ್ರ ಅನುದಾನ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಯೋಜನೆಗಳನ್ನು ತಡೆ ಹಿಡಿಯಲಾಗಿದೆ ಎಂದರು. ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ಕೆಲ ಸದಸ್ಯರು ಗದ್ದಲ ಎಬ್ಬಿಸಿದರು. ಇದರಿಂದ ಕೆಲಕಾಲ ಗೊಂದಲವಾಯಿತು. ಸಭಾಧ್ಯಕ್ಷರು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಸರಾಂತ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಬಳಿ ಪೊಲೀಸ್ ಠಾಣೆ ನಿರ್ಮಿಸಲು ನಿಯಮಾವಳಿಗಳನ್ನು ಸಡಿಲಗೊಳಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆಗೆ ಸಚಿವರು, ಶಾಸಕರು ತಮ್ಮ ಬಳಿ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಕರೂರು ಹೋಬಳಿಯಲ್ಲಿ ಶರಾವತಿಯ ಹಿನ್ನೀರಿಗೆ ಶಾಸಕರ ವಿಶೇಷ ಕಾಳಜಿಯಿಂದ ಮೇಲುಸೇತುವೆ ನಿರ್ಮಾಣವಾಗಿದೆ. ಆ ಬಳಿಕ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸಾವಿರಾರು ಜನ ಭೇಟಿ ನೀಡಲಾರಂಭಿಸಿದ್ದಾರೆ ಎಂದರು. ಈಗಾಗಲೇ ಅಲ್ಲಿ ಪೊಲೀಸ್ ಉಪಠಾಣೆಯಿದೆ. ಅದನ್ನು ಮೇಲ್ದರ್ಜೆಗೇರಿಸಬೇಕು ಎಂಬ ಬೇಡಿಕೆ ಇದೆ. ಠಾಣೆ ನಿರ್ಮಿಸಲು ರಾಷ್ಟ್ರೀಯ ಪೊಲೀಸ್ ಆಯೋಗದ ಮಾನದಂಡದ ಪ್ರಕಾರ ಕನಿಷ್ಟ 300 ಅಪರಾಧಗಳು ನಡೆದಿರಬೇಕು. 50 ರಿಂದ 60 ಸಾವಿರ ಜನಸಂಖ್ಯೆ ಇರಬೇಕು. ಸುಮಾರು 70 ರಿಂದ 150 ಚದರ ಕಿಲೋ ಮೀಟರ್ ವ್ಯಾಪ್ತಿ ಹೊಂದಿರಬೇಕು ಎಂಬ ನಿಯಮಗಳಿವೆ. ಅವುಗಳನ್ನು ಸಡಿಲಗೊಳಿಸಿ ಪೊಲೀಸ್ ಠಾಣೆ ಸ್ಥಾಪಿಸುವ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. #LiveDDChandanaNews #DDChandanaNews #DDChandana #DDKannada