У нас вы можете посмотреть бесплатно Huskur Madduramma Jathra Mahotsava 2025 | ಹುಸ್ಕೂರು ಮದ್ದೂರಮ್ಮ ಜಾತ್ರೆ ಮಹೋತ್ಸವ 2025 или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
In this Video Huskur is famous for Madduramma temple and Huskur fest is well known around Bangalore for the tallest colorful chariots also called as 'Kurju's. Huskur Madduramma Temple, located in Huskur (Anekal Taluk) in the city of Bangalore is a temple dedicated to the Hindu deity Madduramma. It is the oldest temple dates back to the Chola period. Every year the Grand festival(Huskur Jaatre) is celebrated during March or April month. ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದರೆ ಆಕೆ ಭಕ್ತರನ್ನು ಎಲ್ಲಾ ರೀತಿಯ ಅಪಾಯಗಳಿಂದ ರಕ್ಷಿಸುತ್ತಾಳೆ ಮತ್ತು ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತಾಳೆ ಎಂಬುದೇ ಬಹುತೇಕ ಭಕ್ತಾದಿಗಳ ನಂಬಿಕೆಯಾಗಿದೆ. ಪ್ರತೀ ವರ್ಷದ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಇಲ್ಲಿ ನಡೆಯುವ ಅದ್ದೂರಿಯ ಜಾತ್ರಾ ಮಹೋತ್ಸವವನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ. ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಜಾತ್ರೆ ಎಂದರೆ 60-80 ಅಡಿ ಎತ್ತರದ ಒಂದೋ ಇಲ್ಲವೇ ಎರಡು ರಥಗಳನ್ನು ಎಳೆಯುವುದು ಸಾಮಾನ್ಯವಾದರೆ, ಅಪರೂಪ ಎಂಬಂತೆ ನಂಜನಗೂಡಿನಲ್ಲಿ ಪಂಚರಥೋತ್ಸವ ನಡೆದರೆ ಈ ಊರಿನ ಪುರಾಣ ಪ್ರಸಿದ್ಧ ದೇವಾಲಯದಲ್ಲಿ ಕೇವಲ ಆ ಊರಿನವರಲ್ಲದೇ ಸುತ್ತ ಮುತ್ತಲಿನ ಹತ್ತಾರು ಗ್ರಾಮಗಳ ಭಕ್ತಾದಿಗಳು ಸುಮಾರು 120 -200 ಅಡಿಗಳಷ್ಟು ಎತ್ತರದ ಮರದ ಕಂಬಗಳು, ಮರದ ಹಲಗೆ ಮತ್ತು ಬಣ್ಣ ಬಣ್ಣದ ಬಟ್ಟೆಗಳಿಂದ ಅಲಂಕರಿಸಲ್ಪಟ್ಟ ಕುರ್ಜುಗಳು ಎಂದು ಕರೆಯುವ 10-12 ತೇರುಗಳನ್ನು ಹಿಂದಿನ ದಿನವೇ ತಮ್ಮ ಊರುಗಳಲ್ಲಿ ಪೂಜೆ ಮಾಡಿ ಜಾತ್ರೆಯ ದಿನದಂದು ಹುಸ್ಕೂರಿಗೆ ತಂದು ಪೂಜೆ ಮಾಡುವ ವಿಶಿಷ್ಟ ಆಚರಣೆ ನಿಜಕ್ಕೂ ಅಧ್ಭುತವೇ ಸರಿ. ಸುಮಾರು 800 ವರ್ಷಕ್ಕೂ ಹೆಚ್ಚು ಇತಿಹಾಸ ಇರುವ ಹುಸ್ಕೂರು ಮದ್ದೂರಮ್ಮ ದೇವಿಯ ಹೆಸರೇ ಹೇಳುವಂತೆ ಈ ದೇವಾಲಯದ ಮೂಲ ದೇವರು ಮಂಡ್ಯ ಜಿಲ್ಲೆಯ ಮದ್ದೂರಿನದ್ದಾಗಿದ್ದು, ಹುಸ್ಕೂರಿನ ಭಕ್ತರೊಬ್ಬರ ಭಕ್ತಿಗೆ ಮೆಚ್ಚಿ ಈ ಊರಿಗೆ ಬಂದು ನೆಲಸಿತೆಂದು ಸ್ಥಳೀಯರ ನಂಬಿಕೆಯಾಗಿದೆ. ಚೋಳರ ಕಾಲದ ದೇವಾಲಯವನ್ನು ಇತ್ತೀಚೆಗೆ ಭಕ್ತಾದಿಗಳ ಸಹಕಾರದಿಂದ ನವೀಕರಿಸಲಾಗಿದ್ದು ಗರ್ಭಗುಡಿಯಲ್ಲಿ ದೊಡ್ಡ ಮದ್ದೂರಮ್ಮ ಮತ್ತು ಚಿಕ್ಕ ಮದ್ದೂರಮ್ಮ ಎಂಬ ಎರಡು ವಿಗ್ರಹಗಳಿವೆ. ಮದ್ದೂರಮ್ಮನನ್ನು ನಂಬಿ ಪೂಜೆ ಸಲ್ಲಿಸಿದರೆ ತಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವ ನಂಬಿಕೆ ಇರುವ ಕಾರಣ, ಮಂಗಳವಾರ, ಶುಕ್ರವಾರ, ಆಶಾಢ ಮಾಸದ ಸಮಯದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹೊರ ಭಾಗದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಹುಸ್ಕೂರಿನ ಮದ್ದೂರಮ್ಮ ಜಾತ್ರೆ ಎಂದರೆ ಇಡೀ ಆನೇಕಲ್ ತಾಲೂಕಿನಲ್ಲಿ ಒಂದು ಹಬ್ಬದ ವಾತಾವರಣ ನಿರ್ಮಾಣವಾಗುವುದಲ್ಲದೇ ಈ ಮೂಲಕ ಯುಗಾದಿ ಹಬ್ಬಕ್ಕೆ ಮತ್ತಷ್ಟು ಮೆರಗು ತಂದು ಕೊಡುತ್ತದೆ. ಹುಸ್ಕೂರಿನ ಸುತ್ತಮುತ್ತಲ ಗ್ರಾಮಗಳಾದ, ಕೊಡತಿ, ಹಾರೋಹಳ್ಳಿ, ಸಿಂಗೇನ ಅಗ್ರಹಾರ, ದೊಡ್ಡ ನಾಗಮಂಗಲ, ಹಾಗೂ ಮುತ್ತನಲ್ಲೂರ್ ಸೇರಿದಂತೆ, ಸುಮಾರು 10-12 ಗ್ರಾಮಗಳಿಂದ ಭಕ್ತಾದಿಗಳು ತಾವೇ ರಥಗಳನ್ನು ನಿರ್ಮಿಸುತ್ತಾರೆ. ಈ 10-12 ಹಳ್ಳಿಗಳಿಂದ 150 ರಿಂದ 200 ಅಡಿ ಎತ್ತರದ ರಂಗು ರಂಗಿನ ಬೃಹತ್ ಗಾತ್ರದ ಕುರ್ಜುಗಳನ್ನು ತಿಂಗಳುಗಳ ಕಾಲ ಶ್ರದ್ಧಾ ಭಕ್ತಿಯಿಂದ ಸಿದ್ಧಪಡಿಸಲಾಗಿರುತ್ತದೆ, ರಂಗುರಂಗಿನ ಬಟ್ಟೆಗಳಿಂದ ವಿಶಿಷ್ಟ ಶೈಲಿಯ ವಿನ್ಯಾಸದ ಚಿತ್ತಾರಗಳನ್ನ ಹೊದಿಕೆಯಾಗಿಸಿಕೊಂಡು ಮರದ ಅಟ್ಟಣಿಗೆಗಳಿಂದ ನಿರ್ಮಿಸಲಾಗುವ ಈ ತೇರುಗಳು ಯಾವ ಯಾವ ಗ್ರಾಮದ ತೇರು ಎಷ್ಟು ಎತ್ತರ ಇರುತ್ತದೆ ಎಂಬ ಪ್ರತಿಷ್ಠೆಯ ಸಂಕೇತವಾಗುವ ಕಾರಣ ಒಂದು ರೀತಿಯ ಅರೋಗ್ಯಕರ ಸ್ಪರ್ಧೆಗೆ ಹುಸ್ಕೂರು ಜಾತ್ರೆ ವೇದಿಕೆಯಾಗಿ ಮಾರ್ಪಡುತ್ತದೆ ಎಂದರೂ ತಪ್ಪಾಗದು. If you liked the video, then please do share & subscribe to my channel for my upcoming videos. #huskur #jaatre #HuskurJaatre #MaddurammaTemple #HuskurMadduramma Temple #templesofindia #templefestival #rathayatra #oldesttemple #bangaloretemples