У нас вы можете посмотреть бесплатно ಮ್ಯೂಸಿಕ್ ಮೈಲಾರಿಗೆ ಬಿಗ್ ಶಾಕ್ ? ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ ?@chanakyaexpress или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
‘ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ (Social Media) ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ (Folk Singer) ಮ್ಯೂಸಿಕ್ ಮೈಲಾರಿ ((Music Mailari)) ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ (Bagalkot) ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ತಲೆಮರಿಸಿಕೊಂಡಿದ್ದ ಮೈಲಾರಿ ಇಂದು (ಡಿಸೆಂಬರ್ 17) ಮಹಾರಾಷ್ಟ್ರಕ್ಕೆ ತೆರಳುತ್ತಿರುವಾಗ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇದೀಗ ಜಾಮೀನು ಕೋರಿ ಮೈಲಾರಿ, ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಪೋಕ್ಸೊ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಜನವರಿ 5ರಂದು ವಿಚಾರಣೆ ನಡೆಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇನ್ನೊಂದೆಡೆ ಜೈಲಿನಲ್ಲಿರುವ ಮೈಲಾರಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ. ಆದ್ರೆ, ಇದೀಗ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಸಿಂಗರ್ ಮೈಲಾರಿ ಅರೆಸ್ಟ್ ಮಹಾರಾಷ್ಟ್ರದಲ್ಲಿ ಮೈಲಾರಿ ಬಂಧನ ಬೆಳಗಾವಿ ಜಿಲ್ಲೆಯ ಗೋಕಾಕ್ ಠಾಣೆಯಲ್ಲಿ ಮೈಲಾರಿ ಸೇರಿ 7 ಜನರ ವಿರುದ್ಧ ಪೋಕ್ಸೋ ಕೇಸ್ ಪ್ರಕರಣ ದಾಖಲಾಗಿತ್ತು. ನಂತರ ಡಿ.15ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಯಾಗಿತ್ತು.ಬಳಿಕ ಮಹಾಲಿಂಗಪುರ ಪೊಲೀಸರು, ಮೈಲಾರಿ ಬಂಧನಕ್ಕೆ ಹುಡುಕಾಟ ನಡೆಸಿದ್ದರು. ಸುಳಿವು ಸಿಗದಿದ್ದಕ್ಕೆ ತಂಡ ರಚನೆ ಮಾಡಿ ಕಾರ್ಯಚರಣೆ ನಡೆಸಲಾಗಿತ್ತು. ಕೊನೆಗೆ ಮಹಾರಾಷ್ಟ್ರದ ಜತ್ತ ವ್ಯಾಪ್ತಿಯಲ್ಲಿ ಮೈಲಾರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಮೈಲಾರಿ ವಿರುದ್ಧದ ಪೋಕ್ಸೋ ಪ್ರಕರಣದ ಹಿನ್ನೆಲೆ 025ರ ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮ್ಯೂಸಿಕ್ ಮೈಲಾರಿ ಹಾಡಲು ಆಗಮಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಈ ಕಾರ್ಯಕ್ರಮದ ವೇಳೆ ಮೈಲಾರಿ ಸೇರಿ ಏಳು ಜನರು ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಅಲ್ಲದೆ, ಅತ್ಯಾಚಾರ ಎಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.