У нас вы можете посмотреть бесплатно ಕುಪ್ಪಳ್ಳಿ ಕವಿಗ್ರಾಮ/ಕವಿಮನೆ/ಕವಿಶೈಲ ವ್ಲಾಗ್. ಎಲ್ಲಿನೋಡಿದರಲ್ಲಿ ಹಸಿರು.!!! ಎಂಥ ಶೇಕೆ ಮಾರೆ!!!!. или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಈ ವೀಡಿಯೊ ಕುಪ್ಪಳ್ಳಿ, ರಾಷ್ಟ್ರ ಕವಿ ಕುವೆಂಪುರವರ ಊರನ್ನು ಕುರಿತಾಗಿದೆ. ಕುಪ್ಪಳ್ಳಿ ತೀರ್ಥಹಳ್ಳಿ ಸಮೀಪದ ಒಂದು ಕುಗ್ರಾಮ. ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು. ಕುಪ್ಪಳಿಯಲ್ಲಿರುವ ಕುವೆಂಪು ಅವರು ಹುಟ್ಟಿದ ಮನೆ ಈಗಲೂ ಸಾರ್ವಜನಿಕರಿಗೆ ತೆರೆದಿದೆ. ಅಲ್ಲೇ ಇರುವ ಅವರ ಸಮಾಧಿ ಸ್ಥಳವಾದ 'ಕವಿಶೈಲ' ಒಂದು ವಿಶಿಷ್ಟ ಸ್ಮಾರಕ. ಶಿವಮೊಗ್ಗದ ಬಳಿ ಇರುವ ವಿಶ್ವವಿದ್ಯಾಲಯಕ್ಕೆ ಕುವೆಂಪು ಅವರ ಹೆಸರಿಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಗೆ ಕುವೆಂಪು ಅವರ ಹೆಸರಿಡಲಾಗಿದೆ. ಅನುವಾದ ಕಾರ್ಯವನ್ನು ಪ್ರೋತ್ಸಾಹಿಸಲು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಭಾಷಾ ಭಾರತಿ ಸಂಸ್ಥೆಗೆ ಕುವೆಂಪು ಅವರ ಹೆಸರಿಡಲಾಗಿದೆ. ಮೈಸೂರಿನ ಕುವೆಂಪು ನಗರದಲ್ಲಿರುವ ರಸ್ತೆಗಳಿಗೆ ಕುವೆಂಪು ಅವರ ಪರಿಕಲ್ಪನೆಗಳ, ಪಾತ್ರಗಳ ಹೆಸರುಗಳನ್ನು ಇಡಲಾಗಿದೆ. ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.