У нас вы можете посмотреть бесплатно ವಸ್ತು ಪ್ರದರ್ಶನ ಮಂಟಪದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ. или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಶ್ರೀ ಮಂಜುನಾಥ ಸ್ವಾಮಿಯ ಕೃಪಾ ಕಟಾಕ್ಷದೊಂದಿಗೆ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಭ್ರಮ ದಿನಾಂಕ 15.11.2025 ರಿಂದ 20.11.2025 ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭ ಚಿತ್ರ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಜ್ಞಾನ, ವಿಜ್ಞಾನ, ಸುಜ್ಞಾನದ ಅಪೂರ್ವ ಮಾಹಿತಿಯ ಕಣಜ ವಸ್ತುಪ್ರದರ್ಶನ ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊAಡಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜ ವಸ್ತುಪ್ರದರ್ಶನ ಉದ್ಘಾಟಿಸಿ ಶುಭ ಹಾರೈಸಿದರು. ಪುಸ್ತಕ ಮಳಿಗೆಗಳು, ಆರೋಗ್ಯ, ಶಿಕ್ಷಣ, ಕೃಷಿ, ವಾಣಿಜ್ಯ, ಜೀವವಿಮೆ, ಸರ್ಕಾರದ ವಿವಿಧ ಇಲಾಖಾ ಮಳಿಗೆಗಳು, ಅಂಚೆ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಗ್ರಾಮೀಣ ಕರಕುಶಲ ಕೈಗಾರಿಕೆಗಳು, ವಸ್ತç ಮಳಿಗೆಗಳು, ಆಯುರ್ವೇದ ಔಷಧಿ ಮಳಿಗೆಗಳು, ಪೂಜಾ ಸಾಮಾಗ್ರಿಗಳು, ಸಿರಿಧಾನ್ಯಗಳು, ಅಡಿಕೆ ಹಾಳೆತಟ್ಟೆ ತಯಾರಿ, ಸೇರಿದಂತೆ ೩೫೦ಕ್ಕೂ ಮಿಕ್ಕಿ ಮಳಿಗೆಗಳಿದ್ದು ಪ್ರೇಕ್ಷಕರ ಕಣ್ಮನ ಸೆಳೆಯುತ್ತವೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಎಲ್ಲಾ ಮಳಿಗೆಗಳಿಗೂ ಭೇಟಿ ನೀಡಿ ಶುಭ ಹಾರೈಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಜನಾರ್ದನ ಕೆ.ಎನ್., ಎಸ್.ಡಿ.ಎಂ. ಕಾಲೇಜಿನ ಡಾ. ಶ್ರೀಧರ ಭಟ್, ಪಿ. ಜಿನರಾಜ ಆರಿಗ, ವಗ್ಗ ಮೊದಲಾದವರು ಉಪಸ್ಥಿತರಿದ್ದರು. ನ. ೨೦ರ ವರೆಗೆ ಪ್ರತಿ ದಿನ ಬೆಳಿಗ್ಯೆ ಒಂಭತ್ತು ಗಂಟೆಯಿAದ ರಾತ್ರಿ ಹತ್ತು ಗಂಟೆ ವರೆಗೆ ವಸ್ತುಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ. ವಸ್ತುಪ್ರದರ್ಶನ ವೇದಿಕೆಯಲ್ಲಿ ಪ್ರತಿದಿನ ಸಂಜೆ ಆರು ಗಂಟೆಯಿAದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. -- ರಾಜ್ಯಮಟ್ಟದ ವಸ್ತು ಪ್ರದರ್ಶನ ಮಳಿಗೆಯಲ್ಲಿ ವಿವಿಧ ಖಾದ್ಯ ಬಟ್ಟೆ ಉಪಕರಣಗಳು ತಿಂಡಿ ದಿನಸುಗಳು ವಾಹನಗಳು ಎಲ್ಐಸಿ ಬ್ಯಾಂಕಿಂಗ್ ಆಫೀಸುಗಳು ಕೃಷಿ ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಮಳಿಗೆಗಳು ಪುಸ್ತಕಗಳ ಮಳಿಗೆಗಳು ಗ್ರಾಮ ಅಭಿವೃದ್ಧಿ ಯೋಜನೆಯ ವಿವಿಧ ನೋಟಗಳು ಮತ್ತು ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ ಸಂಗೀತ ನಾಟಕ ನೃತ್ಯ ಭರತನಾಟ್ಯ ಯಕ್ಷಗಾನ ಜಾದು ಹೇಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನತೆ.